ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಮತ್ತು ಅವರ ಪುತ್ರಿಗೆ ಕೋವಿಡ್ ದೃಢಪಟ್ಟಿದೆ. ಇಬ್ಬರೂ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ.
ಈ ಇಬ್ಬರಿಗೂ ಜೀನೋಮ್ ಸೀಕ್ವೆನ್ಸಿಂಗ್ ಕೂಡ ಮಾಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದು, ಇವರ ಸಂಪರ್ಕಕ್ಕೆ ಬಂದಿದ್ದ ಇತರರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.