ಬುದೌನ್ (ಉತ್ತರ ಪ್ರದೇಶ):16 ವರ್ಷದ ವಿಶೇಷಚೇತನ ಬಾಲಕಿ (differently abled girl) ಮೇಲೆ ಇಬ್ಬರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ(gang rape)ಎಸಗಿರುವ ಅಮಾನವೀಯ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬುದೌನ್ನ ದತಗಂಜ್ ಕೊಟ್ವಾಲಿ ಪ್ರದೇಶದಲ್ಲಿ ಈ ಪ್ರಕರಣ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪ್ರವೀಣ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದು, ಶುಕ್ರವಾರ ಗದ್ದೆಯಲ್ಲಿ ಕೆಲಸ ಮಾಡ್ತಿದ್ದ ತನ್ನ ತಂದೆಗೆ ಊಟ ನೀಡಲು ಬಾಲಕಿ ತೆರಳುತ್ತಿದ್ದಳು. ಈ ವೇಳೆ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಆರೋಪಿಗಳಿಬ್ಬರು ಅಪ್ರಾಪ್ತರಾಗಿದ್ದಾರೆ. ಬಾಲಕಿಯನ್ನ ಈಗಾಗಲೇ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದಿದ್ದಾರೆ.