ನವದೆಹಲಿ:ಕಳೆದ ಕೆಲ ದಿನಗಳ ಹಿಂದೆ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ದಿಢೀರ್ ಬೆಳವಣಿಗೆವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.
ಕಾಂಗ್ರೆಸ್ನಲ್ಲಿ ತಮಗೆ ಅವಮಾನವಾಗಿದೆ ಎಂದು ಹೇಳಿಕೊಂಡಿದ್ದ ಸಿಂಗ್, ನೇರವಾಗಿ ನವಜೋತ್ ಸಿಂಗ್ ಸಿಧು ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮೂಲಕ ತಾವು ಬೇರೆ ಪಕ್ಷಕ್ಕೆ ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಅಮಿತ್ ಶಾ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆಂಬುದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.