ಚೆನ್ನೈ (ತಮಿಳುನಾಡು): ತಮಿಳುನಾಡಿನ ಥಳಿ ವಿಧಾನಸಭಾ ಕ್ಷೇತ್ರದ ಡೆಂಕಣಿಕೋಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ರೋಡ್ ಶೋ ನಡೆಸಿ ಕಾಂಗ್ರೆಸ್ ಬೆಂಬಲಿತ ಸಿಪಿಐ ಅಭ್ಯರ್ಥಿ ರಾಮಚಂದ್ರನ್ ಅವರ ಪರ ಮತಯಾಚಿಸಿದ್ದಾರೆ.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕರು, ಸಿಪಿಐ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮತದಾರರಲ್ಲಿ ವಿನಂತಿಸಿದ್ದಾರೆ. ಅಭಿವೃದ್ದಿ ದೃಷ್ಟಿಯಿಂದ ಬಡವರ ಉದ್ದಾರಕ್ಕೆ ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರನ್ನ ಗೆಲ್ಲಿಸಿ ಎಂದಿದ್ದಾರೆ.