ನವದೆಹಲಿ:ತೆರಿಗೆ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆಕಾಂಗ್ರೆಸ್ ನಾಯಕ ಡಿಕೆಶಿ ವಿರುದ್ಧದ ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇದೇ ವೇಳೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಜಸ್ಟೀಸ್ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠ ಮಧ್ಯಂತರ ತಡೆ ನೀಡಿದೆ. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಹೊಸದಾಗಿ ಪ್ರಾಸಿಕ್ಯೂಷನ್ ಸಲ್ಲಿಸಲು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಸ್ವಾತಂತ್ರ್ಯ ನೀಡಿದೆ. ಆರು ವಾರಗಳಲ್ಲಿ ನೋಟಿಸ್ಗೆ ಉತ್ತರ ನೀಡುವಂತೆಯೂ ಹಾಗೂ ನಾಲ್ಕು ವಾರಗಳಲ್ಲಿ ಕೌಂಟರ್ ಸಲ್ಲಿಸಲು ಸೂಚನೆ ನೀಡಿದೆ. ಆ ಬಳಿಕ ಎರಡು ವಾರಗಳಲ್ಲಿ ಮರುಜೋಡಣೆ ಮಾಡಲು ನ್ಯಾಯಪೀಠ ಆದೇಶಿಸಿದೆ.