ಅಹಮದಾಬಾದ್(ಗುಜರಾತ್): ಈರೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಶಕ್ತಿವೇಲ್ ಆತ್ಮಹತ್ಯೆಗೆ ಶರಣಾದ ವೈದ್ಯ.
ಶುಕ್ರವಾರ ಮನೆಯ ಒಳಗಿದ್ದ ಶಕ್ತಿವೇಲ್ ಹೊರಗೆ ಬಂದಿರಲಿಲ್ಲ. ಈ ವೇಳೆ ಅನುಮಾನಗೊಂಡ ಅಕ್ಕಪಕ್ಕದವರು ಮನೆಯೊಳಗೆ ಹೋಗಿ ನೋಡಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಈರೋಡ್ ಉತ್ತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶಕ್ತಿವೇಲ್ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.