ಬರೇಲಿ (ಉತ್ತರ ಪ್ರದೇಶ):ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿಯಿಂದ 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯ ಸಿಬಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಯಾನ್ (10) ಮೃತ ಬಾಲಕ.
ಮಂಗಳವಾರಂದು ಅಯಾನ್ ತನ್ನ ನಾಲ್ಕೈದು ಸ್ನೇಹಿತರೊಂದಿಗೆ ಮೈದಾನದಲ್ಲಿ ಆಟ ಆಡುತ್ತಿರುವ ವೇಳೆ ಏಕಾಏಕಿ ಬೀದಿ ನಾಯಿಗಳ ಗುಂಪು ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿವೆ. ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಕೆಲವು ಮಕ್ಕಳು ಮರವೇರಿ ಬಚಾವ್ ಆದರೆ ಅಯಾನ್ ಮಾತ್ರ ಕೆಳೆಗೆ ಉಳಿದಿದ್ದ. ಈ ವೇಳೆ ಬೀದಿ ನಾಯಿಗಳು ಆತನನ್ನು ಸುತ್ತುವರೆದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು.