ಕರ್ನಾಟಕ

karnataka

ETV Bharat / bharat

ಗೃಹ ಬಳಕೆ ಎಲ್​ಪಿಜಿ ಸಿಲಿಂಡರ್​ ಮತ್ತೆ 50 ರೂಪಾಯಿ ಹೆಚ್ಚಳ

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಮತ್ತೆ ಹೆಚ್ಚಿಸಿವೆ.

ಎಲ್​ಪಿಜಿ ಸಿಲಿಂಡರ್​
ಎಲ್​ಪಿಜಿ ಸಿಲಿಂಡರ್​

By

Published : Jul 6, 2022, 9:21 AM IST

ನವದೆಹಲಿ: ಹಣದುಬ್ಬರದಿಂದ ಕಂಗಾಲಾಗಿರುವ ಶ್ರೀಸಾಮಾನ್ಯ ಮತ್ತೆ ಬೆಲೆ ಏರಿಕೆ ಶಾಕ್‌ಗೆ ಒಳಗಾಗಿದ್ದಾನೆ. ಗೃಹ ಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.

ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌​ ದರವನ್ನು ಪ್ರತಿ ಸಿಲಿಂಡರ್‌ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.

ದೆಹಲಿಯಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್‌ ದರ 1,053 ರೂ. ಆಗಿದೆ. 5 ಕೆಜಿಯ ಗೃಹ ಬಳಕೆ ಸಿಲಿಂಡರ್ ಬೆಲೆ ಸಹ ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್​ಗೆ 18 ರೂ. ಏರಿಕೆ ಮಾಡಲಾಗಿದೆ.

19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ. ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.

ಇದನ್ನೂ ಓದಿ:ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಮತ್ತೆ ಏರಿಕೆ

ABOUT THE AUTHOR

...view details