ಕರ್ನಾಟಕ

karnataka

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ನಿರ್ಧಾರ ಮರುಪರಿಶೀಲಿಸಿ: ಕೇಂದ್ರಕ್ಕೆ ಪ್ರಿಯಾಂಕ ಪತ್ರ

By

Published : May 31, 2021, 9:02 PM IST

ಹನ್ನೆರಡನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ವಿಷಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಕ್ರಿಯೆ ಪಡೆದ ನಂತರ ಮೂರು ಪುಟಗಳ ಪತ್ರವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರಕ್ಕೆ ಬರೆದಿದ್ದಾರೆ.

ಪ್ರಿಯಾಂಕ ವಾದ್ರಾ ಗಾಂಧಿ
ಪ್ರಿಯಾಂಕ ವಾದ್ರಾ ಗಾಂಧಿ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟು ಇರುವ ಕಾರಣ ಸಿಬಿಎಸ್‌ಇ 12ನೇ ತರಗತಿ ಮಂಡಳಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಈ ಕುರಿತು ಕೇಂದ್ರವು ಶೀಘ್ರದಲ್ಲೇ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಹನ್ನೆರಡನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ವಿಷಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಕ್ರಿಯೆ ಪಡೆದ ನಂತರ ಮೂರು ಪುಟಗಳ ಪತ್ರವನ್ನು ಬರೆಯಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

"ಸಿಬಿಎಸ್ಇ 12 ನೇ ಬೋರ್ಡ್ ಪರೀಕ್ಷೆಗಳನ್ನು ಮರುಪರಿಶೀಲಿಸುವಂತೆ ಮತ್ತು ಅವರು (ವಿದ್ಯಾರ್ಥಿಗಳು ಮತ್ತು ಪೋಷಕರು) ನೀಡಿದ ಸಲಹೆಗಳನ್ನು ಬಹಳ ಗಂಭೀರವಾಗಿ ಪರಿಗಣಿಸುವಂತೆ ನಾನು ಮತ್ತೊಮ್ಮೆ ನಿಮ್ಮನ್ನು ಒತ್ತಾಯಿಸುತ್ತೇನೆ. ಜೀವಕ್ಕೆ ಅಪಾಯವನ್ನುಂಟು ಮಾಡುವ ಸಂದರ್ಭಗಳಿಗೆ ತಳ್ಳಲ್ಪಟ್ಟರೆ ಅದು ದೊಡ್ಡ ಅನ್ಯಾಯವಾಗುತ್ತದೆ"ಎಂದು ಕಾಂಗ್ರೆಸ್ ನಾಯಕಿ ಬರೆದಿದ್ದಾರೆ.

ಮಕ್ಕಳು ಭವಿಷ್ಯದ ಪೀಳಿಗೆಯ ಭಾರತೀಯರು. ಅವರು ಈಗಾಗಲೇ ತಮ್ಮ ಶಾಲಾ ಶಿಕ್ಷಣದ ಕೊನೆಯ ವರ್ಷದಲ್ಲಿ ಅಪಾರ ಒತ್ತಡವನ್ನು ಎದುರಿಸಿದ್ದಾರೆ. ಹೀಗಾಗಿ ಮಂಡಳಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ABOUT THE AUTHOR

...view details