ನವದೆಹಲಿ:ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ಈ ಹಿಂದೆ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಹಿಜಾಬ್ ಧರಿಸಬೇಕು ಎಂದು ಆದೇಶ ನೀಡಿತ್ತು. ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಕೆಲವರಿಂದ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಹಿಜಾಬ್ ವಿಚಾರ ಸೆನ್ಸೇಷನ್ ಮಾಡಬೇಡಿ: ಶೀಘ್ರ ವಿಚಾರಣೆಗೆ ಸುಪ್ರೀಂ ನಕಾರ - ಹಿಜಾಬ್ ಪ್ರಕರಣದ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ
ಹಿಜಾಬ್ಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದ್ದು, ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಹಿಜಾಬ್ ವಿಚಾರವನ್ನು ಸೆನ್ಸೇಷನ್ ಮಾಡಬೇಡಿ: ವಿಚಾರಣೆಗೆ ದಿನಾಂಕ ನಿಗದಿಗೆ ಸುಪ್ರೀಂ ತಿರಸ್ಕಾರ
ಹಿರಿಯ ವಕೀಲ ದೇವದತ್ ಕಾಮತ್ ಅವರು ಹಿಜಾಬ್ ಧರಿಸುವ ಮುಸ್ಲಿಂ ವಿದ್ಯಾರ್ಥಿನಿಯರ ಪರವಾಗಿ ಇದ್ದ ಒಂದು ಪ್ರಕರಣವನ್ನು ಪ್ರಸ್ತಾಪಿಸಿ, ಈ ಪ್ರಕರಣವನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಪರೀಕ್ಷೆಗಳು ಸಮೀಪಿಸುತ್ತಿರುವ ಕಾರಣದಿಂದ ತುರ್ತು ವಿಚಾರಣೆ ನಡೆಯಬೇಕೆಂದು ಅವರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಇದಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಈ ವಿಷಯವನ್ನು ಸೆನ್ಸೇಷನ್ ಮಾಡಬೇಡಿ ಎಂದು ಸೂಚನೆ ನೀಡಿತು
Last Updated : Mar 24, 2022, 1:33 PM IST