ನವದೆಹಲಿ : ಕೋವಿಡ್ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದುಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ಬಳಿಕ ಅವರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, "ಡಾ. ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಸಾಧ್ಯವಿರುವ ಎಲ್ಲಾ ಉತ್ತಮ ವೈದ್ಯಕೀಯ ಸೇವೆಗಳನ್ನು ನೀಡಲಾಗ್ತಿದೆ. ನಾವೆಲ್ಲ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸೋಣ" ಎಂದು ಹೇಳಿದ್ದಾರೆ.