ಲಖನೌ(ಉತ್ತರ ಪ್ರದೇಶ):ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥ ಮಾಯಾವತಿ ದೇಶದ ರಾಷ್ಟ್ರಪತಿ ಆಗುವ ಕನಸು ಕಾಣುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಅಖಿಲೇಶ್ ಯಾದವ್ಗೆ ಇದೀಗ ಮಾಯಾವತಿ ತಿರುಗೇಟು ನೀಡಿದ್ದಾರೆ. ನಾನು ರಾಷ್ಟ್ರಪತಿ ಅಲ್ಲ, ಬದಲಾಗಿ ರಾಜ್ಯದ ಮುಖ್ಯಮಂತ್ರಿ ಅಥವಾ ಪ್ರಧಾನಿ ಆಗುವ ಕನಸು ಕಾಣುತ್ತಿದ್ದೇನೆಂದು ಟಕ್ಕರ್ ನೀಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ತನ್ನ ಮತಗಳನ್ನು ಬಿಜೆಪಿಗೆ ವರ್ಗಾವಣೆ ಮಾಡಿದೆ ಎಂದು ಅಖಿಲೇಶ್ ಯಾದವ್ ಆರೋಪ ಮಾಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಅವರನ್ನ ದೇಶದ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡುತ್ತದೆಯೇ ಎಂಬುದನ್ನು ಕಾಯ್ದು ನೋಡಬೇಕು ಎಂದಿದ್ದರು. ಇದರ ಜೊತೆಗೆ, ಬಿಎಸ್ಪಿ ಜನರಲ್ ಸೆಕ್ರೆಟರಿ ಎಸ್ಸಿ ಮಿಶ್ರಾ ಹಾಗೂ ಪಕ್ಷದ ಶಾಸಕ ಉಮಾ ಶಂಕರ್ ಸಿಂಗ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಬೆನ್ನಲ್ಲೇ ಮಾಯಾವತಿ ಸುದ್ದಿಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದಾರೆ.