ಕರ್ನಾಟಕ

karnataka

ETV Bharat / bharat

Opposition strategy: ಸಂಸತ್ ಅಧಿವೇಶನದಲ್ಲಿ ಕೇಂದ್ರವನ್ನು ಕಟ್ಟಿಹಾಕಲು ಕಾರ್ಯತಂತ್ರ: ಕಪ್ಪು ಬಟ್ಟೆ ಧರಿಸಿ 'ಇಂಡಿಯಾ' ನಾಯಕರ ಒಗ್ಗಟ್ಟು - Opposition leaders strategy

Opposition leaders strategy: ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ 17 ಪಕ್ಷಗಳ ಪ್ರತಿಪಕ್ಷದ ನಾಯಕರು ಸಾಂಕೇತವಾಗಿ ಇಂದು ಕಪ್ಪು ಬಟ್ಟೆ ಧರಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟ್ಟಿಹಾಕುವ ಕಾರ್ಯತಂತ್ರ ರೂಪಿಸಿದರು.

Dressed in black, Opposition MPs meet to chalk out strategy in Parliament
Dressed in black, Opposition MPs meet to chalk out strategy in Parliament

By

Published : Jul 27, 2023, 1:36 PM IST

ನವದೆಹಲಿ:ಮಣಿಪುರ ಹಿಂಸಾಚಾರ ವಿಚಾರವಾಗಿ ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಭಾರಿ ಗದ್ದಲ ನಡೆಯುತ್ತಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ 17 ಪ್ರತಿಪಕ್ಷಗಳ ನಾಯಕರು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಗುರುವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಮಣಿಪುರ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಯವರು ಹೇಳಿಕೆ ನೀಡುವಂತೆ ಪಟ್ಟು ಹಿಡಿದಿರುವ ನಾಯಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿ ಸಂಸತ್ತಿನ ಉಭಯ ಸದನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಏನೆಲ್ಲ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಚರ್ಚಿಸಿದರು.

ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಮಗೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಇದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವೀಕರಿಸಿದ್ದರು. ಅಲ್ಲದೇ ಮಣಿಪುರ ಮತ್ತು ಇತರ ಜ್ವಲಂತ ಸಮಸ್ಯೆಗಳ ಕುರಿತು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳ ನಡುವಿನ ಹಣಾಹಣಿಗೆ ಸಮಯ ನಿಗದಿ ಮಾಡುವುದಾಗಿಯೂ ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪ್ರತಿಪಕ್ಷದ ನಾಯಕರು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಮತ್ತೆ ಒಗ್ಗಟ್ಟಿನ ಮಂತ್ರ ಜಪಿಸಿದರು. ಎನ್​ಡಿಎ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟ್ಟಿ ಹಾಕಲು ಯಾವೆಲ್ಲ ಪ್ರಯೋಗಗಳನ್ನು ಉಪಯೋಗಿಸಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಿದರು.

ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದ್ದು, "ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಚರ್ಚೆ ಮಾಡದೇ ಮೌನವಹಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಯಲೇಬೇಕು. ಉಭಯ ಸಂಸತ್ತಿನಲ್ಲಿ ಅವರು ಹೇಳಿಕೆ ನೀಡಬೇಕು ಎಂದು 'ಇಂಡಿಯಾ' ಬಯಸುತ್ತದೆ. ಈ ಬಗ್ಗೆ ರಾಜ್ಯಸಭೆಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಪ್ರತಿಪಕ್ಷದ ನಾಯಕರ ಕೊಠಡಿಯಲ್ಲಿ ಸಭೆ ಕೂಡ ನಡೆದಿದೆ'' ಎಂದು ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಅಲ್ಲದೆ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಸಿಪಿಐ(ಎಂ), ಆರ್‌ಜೆಡಿ, ಎಸ್‌ಪಿ, ಜೆಡಿಯು, ಎನ್‌ಸಿಪಿ, ಶಿವಸೇನೆ (ಯುಬಿಟಿ), ಎಎಪಿ, ಸಿಪಿಐ, ಐಯುಎಂಎಲ್, ಆರ್‌ಎಲ್‌ಡಿ, ಕೆಸಿ (ಎಂ), ಜೆಎಂಎಂ, ಆರ್‌ಎಸ್‌ಪಿ ಮತ್ತು ವಿಸಿಕೆ ನಾಯಕರು ಭಾಗವಹಿಸಿದ್ದರು.

ಮಣಿಪುರದ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿವೆ. ಗುರುವಾರವೂ ಸಹ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದ್ದರಿಂದ ಉಭಯ ಸದನಗಳ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಣಿಪುರ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಕಪ್ಪು ಪಟ್ಟಿ ಧರಿಸಿ ಇಂದು ಸದನಕ್ಕೆ ಬಂದ ಇಂಡಿಯಾ ಒಕ್ಕೂಟದ ಸದಸ್ಯರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರೆದು ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್​ ಪ್ರಸ್ತಾಪ, ದಿನಾಂಕ ನಿಗದಿಯೊಂದೇ ಬಾಕಿ!

ABOUT THE AUTHOR

...view details