ನವದೆಹಲಿ:ವಿಶ್ವಾದ್ಯಂತ ಮತ್ತೆ ಕೊರೋನಾ ಅಟ್ಟಹಾಸ ಮೇರೆಮೀರುತ್ತಿದೆ. ಚೀನಾದಲ್ಲಿ ಮತ್ತೆ ಕೋವಿಡ್ ಉಲ್ಬಣಗೊಂಡಿದೆ. ದೇಶದಲ್ಲೂ ಕೆಲ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲ ಮುಂಜಾಗ್ರತೆ ಕ್ರಮಗಳನ್ನು ಘೋಷಿಸಿವೆ.
ನಿನ್ನೆ ಪ್ರಧಾನಿ ಮೋದಿ ನೇತೃತ್ಚದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆದು, ಕೊರೋನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ವೈದ್ಯಕೀಯ ವ್ಯವಸ್ಥೆಯನ್ನ ಸನ್ನದ್ಧವಾಗಿಡಲು ಸೂಚನೆ ನೀಡಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ, ದೂರದ ಪ್ರದೇಶಗಳಲ್ಲಿ ರಕ್ತ, ಲಸಿಕೆ ಮತ್ತು ಔಷಧ ವಿತರಣೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಘೋಷಿಸಿದ್ದಾರೆ. 2014 ರಲ್ಲಿ ದೇಶದಲ್ಲಿ ಕೇವಲ 6 ಏಮ್ಸ್ಗಳು ಇದ್ದವು. ಈಗ ಅವುಗಳ ಸಂಖ್ಯೆ 22ಕ್ಕೆ ಏರಿಕೆ ಆಗಿದೆ. ಅಷ್ಟೇ ಅಲ್ಲ ಶೇ 90 ರಷ್ಟು ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.