ಮೀರತ್: ಕುಡಿದ ಅಮಲಿನಲ್ಲಿ ತನ್ನ ಹೆಂಡ್ತಿಯನ್ನು ಮೂರನೇ ಅಂತಸ್ತಿನಿಂದ ಕೆಳಗೆ ದೂಡಿದ ಘಟನೆ ಕಾಲಿಯಾ ಗಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಬಿಜೇಂದ್ರ ಸುಮಾರು 12 ವರ್ಷಗಳ ಹಿಂದೆ ರಜನಿ ಅವರನ್ನು ವಿವಾಹವಾಗಿದ್ದರು. ಬಿಜೇಂದ್ರ ಡ್ರೈವರ್ ಆಗಿದ್ದು, ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಕಳೆದ ಹಲವಾರು ವರ್ಷಗಳಿಂದ ಅವರು ಮದ್ಯ ಮತ್ತು ಗಾಂಜಾ ವ್ಯಸನಿಯಾಗಿದ್ದರು.
ಗಂಡ ಕುಡಿಯುವುದಕ್ಕೆ ತಡೆಯಲು ಯತ್ನಿಸಿದ್ದಾರೆ. ಈ ವಿಷಯಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಕಳೆದ ದಿನ ಇವರ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ, ತನ್ನ ಹೆಂಡ್ತಿಯನ್ನು ಮೂರನೇ ಮಹಡಿಯಿಂದ ತಳ್ಳಿದ್ದಾನೆ. ಕೆಳಗೆ ಬಿದ್ದ ರಜನಿ ಸಾವನ್ನಪ್ಪಿದ್ದಾಳೆ. ಈ ಸುದ್ದಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಮಹಿಳೆ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.