ನೈನಿತಾಲ್(ಉತ್ತರಾಖಂಡ):ಉತ್ತರಾಖಂಡ ವಿಧಾನಸಭೆಗೆ ಫೆ.14 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ಸಿಂಗ್ ರಾವತ್ ಅವರು ಮತದಾರರ ಸೆಳೆಯಲು ಜನರ ಜೊತೆ ಹೆಚ್ಚು ಸಂಪರ್ಕ ಬೆಳೆಸಿಕೊಳ್ಳುತ್ತಿದ್ದಾರೆ.
ಇಂದು ನೈನಿತಾಲ್ನ ವರ್ಮಾ ಕಾಲೊನಿಯಲ್ಲಿ ಮತಯಾಚನೆ ಮಾಡುತ್ತಿದ್ದಾಗ ಪುಟ್ಟ ಮಗುವೊಂದನ್ನು ಎತ್ತಿಕೊಂಡು ಮುದ್ದಾಡಿ ಜನರ ಪ್ರೀತಿಗೆ ಕಾರಣರಾದರು. ಮಾಜಿ ಮುಖ್ಯಮಂತ್ರಿಯೊಬ್ಬರು ಇಷ್ಟು ಸರಳವಾಗಿದ್ದಾರಲ್ಲ ಎಂಬ ಭಾವವನ್ನು ಜನರಲ್ಲಿ ಮೂಡಿಸಿದ್ದಾರೆ.