ನವದೆಹಲಿ:ದೇಶದಲ್ಲಿ ದೈನಂದಿನ ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾಗುವ ಆರಂಭಿಕ ಪ್ರವೃತ್ತಿ ಶುರುವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಮೂಲಕ ಭಾರತದಲ್ಲಿ ವೈರಸ್ನ ಎರಡನೇ ತರಂಗವು ಕ್ಷೀಣಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.
ಕೇಂದ್ರ ಸರ್ಕಾರದ ಪ್ರಕಾರ, ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಮತ್ತು ಛತ್ತೀಸ್ಗಡ ಸೇರಿ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ.
ಈ ಕುರಿತು ಮಾಹಿತಿ ನೀಡಿರುವ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು, ಕೇರಳ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪಂಜಾಬ್ಗಳಲ್ಲಿ ಹೊಸ ಕೋವಿಡ್ ಪ್ರಕರಣಗಳು ಅಧಿಕವಾಗಿ ದಾಖಲಾಗುತ್ತಿವೆ ಎಂದಿದ್ದಾರೆ.