ಮುಂಬೈ(ಮಹಾರಾಷ್ಟ್ರ): ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಉರುಳಿ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಮೂಲಕ ಮುಂಬೈ ಮತ್ತು ಥಾಣೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವ್ಯವಸ್ಥೆ ಏರ್ಪಟ್ಟಿದೆ.
ಟ್ರಕ್ನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 20 ಟನ್ನಷ್ಟು ಟೊಮ್ಯಾಟೋ ರಸ್ತೆಯಲ್ಲಿ ಬಿದ್ದಿದ್ದು, ಜೆಸಿಬಿಗಳನ್ನು ಬಳಸಿ ತೆರವುಗೊಳಿಸಲಾಗುತ್ತಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.