ಉತ್ತರಕಾಶಿ(ಉತ್ತರಾಖಂಡ): ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ಮಧ್ಯರಾತ್ರಿ 1.50ರ ಸುಮಾರಿಗೆ ಭೂಮಿ ಕಂಪಿಸಿದ್ದು, ಕೂಡಲೇ ಜನರು ಭಯದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಉತ್ತರಕಾಶಿಯಲ್ಲಿ ಕಂಪಿಸಿದ ಭೂಮಿ: 3.1 ತೀವ್ರತೆ ದಾಖಲು - ಸಾವು ನೋವು ಅಥವಾ ಆಸ್ತಿ ಪಾಸ್ತಿ ನಷ್ಟ
ಉತ್ತರ ಕಾಶಿಯಲ್ಲಿ 3.1 ತೀವ್ರತೆಯ ಭೂಕಂಪನವಾಗಿದ್ದು, ಯಾವುದೇ ಸಾವು ನೋವು ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಉತ್ತರಾಖಂಡದಲ್ಲಿ ಭೂಮಿ ಕಂಪಿಸಿದ ಅನುಭವ
ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ ಪ್ರಕಾರ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಸುಮಾರು 5 ಕಿ.ಮೀ ಆಳದಲ್ಲಿದ್ದ ಕಾರಣ ಯಾವುದೇ ಸಾವು ನೋವು ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದೆ. ಈ ಹಿಂದೆ ನ. 12 ರಂದು ಕೂಡ ಉತ್ತರಾಖಂಡದಲ್ಲಿ ಭೂಕಂಪನದ ಅನುಭವವಾಗಿತ್ತು. ಆಗ ಭೂಕಂಪನದ ತೀವ್ರತೆ ಹೆಚ್ಚಾಗಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ತೋರಿಸಿತ್ತು.
ಇದನ್ನೂ ಓದಿ:ದೆಹಲಿಯ ಬಳಿಕ ಅಮೃತಸರದಲ್ಲೂ ಭೂಕಂಪನ; 4.1 ತೀವ್ರತೆ ದಾಖಲು