ಶಿಮ್ಲಾ: ಕಳೆದ ಹದಿನೈದು ದಿನಗಳಿಂದ ಹಿಮಾಲಯ ಪರ್ವತ ಪ್ರದೇಶವು ಸರಣಿ ಭೂಕಂಪನಗಳಿಗೆ ಸಾಕ್ಷಿಯಾಗಿದೆ. ನಿನ್ನೆ ರಾತ್ರಿ 9:32 ರ ಸುಮಾರಿಗೆ ರಾಜ್ಯದ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.
ಗುಡ್ಡಗಾಡು ರಾಜ್ಯ ಮಂಡಿಯಿಂದ ವಾಯುವ್ಯಕ್ಕೆ 27 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರಬಿಂದು ಪತ್ತೆಯಾಗಿದೆ. ಮಂಡಿ, ಕಂಗ್ರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭುವಿಯೊಡಲು ನಡುಗಿದ ಅನುಭವವಾಗಿದೆ. ಯಾವುದೇ ಪ್ರಾಣ ಹಾಗೂ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.