ಕ್ಯಾಂಪ್‌ಬೆಲ್(ಅಂಡಮಾನ್ ಮತ್ತು ನಿಕೋಬಾರ್):ನಸುಕಿನಜಾವಬಂಗಾಳಕೊಲ್ಲಿಯಲ್ಲಿರುವ ಅಂಡಮಾನ್ ಸಮುದ್ರ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ.. ರಿಕ್ಟರ್ ಮಾಪದಲ್ಲಿ 6.1ರಷ್ಟು ತೀವ್ರತೆ ದಾಖಲು - ಅಂಡಮಾನ್ ಸಮುದ್ರ ತೀರದಲ್ಲಿ ಭೂಕಂಪನ
ಇಂದು ನಸುಕಿನ ವೇಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ ಭೂಕಂಪನ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ನಡುಗಿದ ಭೂಮಿ
ಭೂಕಂಪದ ಕೇಂದ್ರ ಬಿಂದು ಭೂಮಿಯಿಂದ 75 ಕಿ.ಮೀ ಆಳದಲ್ಲಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ (ಎನ್ಸಿಎಸ್) ಮಾಹಿತಿ ನೀಡಿದೆ. ಭೂಕಂಪದ ನಂತರ ಯಾವುದೇ ಜೀವ ಅಥವಾ ಆಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಓದಿ:ಭೂಕಂಪನದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ 17 ದಿನಗಳ ಬಳಿಕ ಮೃತ್ಯುಂಜಯನಾಗಿ ಬಂದ!