ಕಿನ್ನೌರ್ (ಹಿಮಾಚಲ ಪ್ರದೇಶ): ಹಿಮಾಚಲದ ಕಿನ್ನೌರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 11.27ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕಿನ್ನೌರ್ ಜಿಲ್ಲೆಯಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಭೂವಿಜ್ಞಾನಿಗಳ ಪ್ರಕಾರ, ಹಿಮಾಚಲ ಪ್ರದೇಶದ ಕೆಲ ಭಾಗಗಳು ಭೂಕಂಪ ಸೂಕ್ಷ್ಮ ವಲಯಗಳಾಗಿರುವುದರಿಂದ ಲಘು ಮತ್ತು ಪ್ರಬಲ ಭೂಕಂಪನಗಳು ಆಗಾಗ ಸಂಭವಿಸುತ್ತಿರುತ್ತದೆ.