ಉತ್ತರಕಾಶಿ :ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ 3.15ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಆದರೆ, ಇದುವರೆಗೆ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ 58 ಕಿ.ಮೀ ದೂರಲ್ಲಿ ಹಾಗೂ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.