ಸೂರತ್:ಗುಜರಾತ್‌ನ ಸೂರತ್ ಮತ್ತು ಭರೂಚ್ ಜಿಲ್ಲೆಗಳಲ್ಲಿ ಭೂಕಂಪ ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಗುಜರಾತ್‌ನಲ್ಲಿ 4.3 ತೀವ್ರತೆಯ ಭೂಕಂಪ: ಆತಂಕ - ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲು
ಗುಜರಾತ್‌ನ ಸೂರತ್ ಮತ್ತು ಭರೂಚ್ ಜಿಲ್ಲೆಗಳಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.
ಗುಜರಾತ್‌ನಲ್ಲಿ 4.3 ತೀವ್ರತೆಯ ಭೂಕಂಪ
ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ. ಭರೂಚ್ ನಗರದಿಂದ 36 ಕಿ.ಮೀ ದೂರದಲ್ಲಿರುವ ನೇತ್ರಾಂಗ್-ತಹಸಿಲ್ ಗ್ರಾಮದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ.
ಪಂಚಮಹಲ್, ಹ್ಯಾಲೊಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾದ ಜನರು ಮನೆ - ಕಚೇರಿಗಳಿಂದ ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.