ನವದೆಹಲಿ: ಹೊಸ ವರ್ಷದ ಸಂಭ್ರಮಾಚರಣೆಯ ಮಧ್ಯೆ ಭುವಿಯೊಡಲಿಂದ ತಲ್ಲಣ ಉಂಟಾಗಿದೆ. ದೆಹಲಿ, ಹರಿಯಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನವಾಗಿದೆ. ಕಳೆದ ರಾತ್ರಿ ಜನರು ಮನೆ, ಕಟ್ಟಡಗಳಿಂದ ಹೊರಗೋಡಿ ಬಂದು ಆತಂಕಗೊಂಡಿದ್ದಾರೆ.
ಹರಿಯಾಣದ ಜಜ್ಜರ್‌ನಲ್ಲಿ 3.8 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಮಿಯ 5 ಕಿಮೀ ಆಳದಲ್ಲಿ ಕಂಪನದ ಅಲೆಗಳು ಉಂಟಾಗಿವೆ. ಜಜ್ಜರ್ನ 12 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಯಾವುದೇ ಜೀವ, ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂಬ ಮಾಹಿತಿ ಸಿಕ್ಕಿದೆ.