ಕರ್ನಾಟಕ

karnataka

ETV Bharat / bharat

ಅಂಡಮಾನ್ ನಿಕೋಬಾರ್‌ನಲ್ಲಿ 5.0 ತೀವ್ರತೆಯ ಭೂಕಂಪನ: ಪಾಕ್‌ನಲ್ಲೂ ನಡುಕ - ರಾಷ್ಟ್ರೀಯ ಭೂಕಂಪನ ಕೇಂದ್ರ

ಇಂದು ಬೆಳಗ್ಗೆ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಮತ್ತು ಪಾಕಿಸ್ತಾನದಲ್ಲಿ ಭೂಮಿ ಕಂಪಿಸಿದೆ.

earthquakes
ಭೂಕಂಪನ

By

Published : Mar 6, 2023, 10:09 AM IST

ಹೈದರಾಬಾದ್: ಅಂಡಮಾನ್ ನಿಕೋಬಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಅಷ್ಟೇ ಅಲ್ಲದೆ, ಪಾಕಿಸ್ತಾನದಲ್ಲಿಯೂ ಸಹ ಭೂಮಿ ಕಂಪಿಸಿದ ಅನುಭವವಾಗಿದ್ದು, 4.3 ತೀವ್ರತೆ ದಾಖಲಾಗಿದೆ. ಎನ್‌ಸಿಎಸ್ ಕೇಂದ್ರ ನೀಡಿದ ಮಾಹಿತಿಯಂತೆ, "ಅಂಡಮಾನ್ ನಿಕೋಬಾರ್ ದ್ವೀಪ ಪ್ರದೇಶದಲ್ಲಿ 10 ಕಿ.ಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪನ ಸಂಭವಿಸಿದೆ. ಸೋಮವಾರ ಬೆಳಗ್ಗೆ 5.07ಕ್ಕೆ ಭೂಮಿ ಕಂಪಿಸಿದ್ದು, ಜೀವ ಹಾನಿಯಾದ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ" ಎಂದು ಟ್ವೀಟ್‌ ಮಾಡಿದೆ.

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ.. ಟರ್ಕಿ-ಸಿರಿಯಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 41ಸಾವಿರಕ್ಕೆ ಏರಿಕೆ

ಪಾಕಿಸ್ತಾನದಲ್ಲಿ ಭೂಕಂಪನ: ಇನ್ನು ಗುಜರಾತ್‌ನ ದ್ವಾರಕಾದಿಂದ ಉತ್ತರಕ್ಕೆ 431 ಕಿ.ಮೀ ದೂರದಲ್ಲಿರುವ ಪಾಕಿಸ್ತಾನದಲ್ಲಿ ಭೂಕಂಪನ ಸಂಭವಿಸಿದೆ. ಬೆಳಗ್ಗೆ 6.32 ಕ್ಕೆ ಕಂಪನವಾಗಿರುವ ವರದಿಯಾಗಿದ್ದು,15 ಕಿ.ಮೀ ಆಳದಲ್ಲಿ ಘಟನೆ ಜರುಗಿದೆ ಎಂದು ದೇಶದಲ್ಲಿ ಭೂಕಂಪ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ಕೇಂದ್ರ ಸರ್ಕಾರ ನೇಮಿಸಿದ ನೋಡಲ್ ಏಜೆನ್ಸಿ ತಿಳಿಸಿದೆ.

ಇದನ್ನೂ ಓದಿ:ಇಂಡೋನೇಷ್ಯಾದಲ್ಲಿ ಕಂಪಿಸಿದ ಭೂಮಿ; ಟರ್ಕಿಯಲ್ಲಿ ಮೃತರ ಸಂಖ್ಯೆ 47 ಸಾವಿರಕ್ಕೇರಿಕೆ

ಜಮ್ಮು ಕಾಶ್ಮೀರದಲ್ಲಿ ಭೂಕಂಪನ: ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿಯೂ ಸಹ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದ್ದು, ಬೆಳಗ್ಗೆ 6.57 ಕ್ಕೆ ಘಟನೆ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು. ಮಾಹಿತಿ ಪ್ರಕಾರ, ಭೂಮಿಯ ಒಳಭಾಗದಲ್ಲಿ 10 ಕಿ.ಮೀ ಆಳದಲ್ಲಿ ಕಂಪಿಸಿದೆ. ಎಲ್ಲಿಯೂ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿಯಾದ ಕುರಿತು ವರದಿಯಾಗಿರಲಿಲ್ಲ.

ಇದನ್ನೂ ಓದಿ:ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ

ಇದಕ್ಕೂ ಮುನ್ನ, ಫೆ.28ರಂದು ಮಣಿಪುರದ ನೋನಿ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪನ ಸಂಭವಿಸಿತ್ತು ಎಂದು ಎನ್‌ಸಿಎಸ್ ವರದಿ ಮಾಡಿತ್ತು. ಮುಂಜಾನೆ 2.46ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಭೂಮಿಯ 25 ಕಿ.ಮೀ ಆಳದಲ್ಲಿ ಕಂಪಿಸಿದೆ ಎಂದು ತಿಳಿಸಿದೆ. ಈ ವೇಳೆಯೂ ಕೂಡಾ ಪಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

ಇದನ್ನೂ ಓದಿ:ಚೀನಾ ಗಡಿ ಬಳಿಯ ತಜಕಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ

ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಪೂರ್ವ ಈಶಾನ್ಯಕ್ಕೆ 267 ಕಿ.ಮೀ ದೂರದಲ್ಲಿ ಮಾರ್ಚ್​ 3ರ ಗುರುವಾರ ಮಧ್ಯಾಹ್ನ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿತ್ತು. 37.73 ಅಕ್ಷಾಂಶ ಮತ್ತು 73.47 ರೇಖಾಂಶದಲ್ಲಿ 245 ಕಿ.ಮೀ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಎನ್‌​ಸಿಎಸ್​ ಟ್ವೀಟ್​​ ಮಾಡಿದೆ.

ABOUT THE AUTHOR

...view details