ನವದೆಹಲಿ:ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿ ಆರೋಪವನ್ನು ಚುನಾವಣಾ ಆಯೋಗ (ಇಸಿಐ) ಭಾನುವಾರ ಅಲ್ಲಗಳೆದಿದೆ. ರಾಜ್ಯದ ವೀಕ್ಷಕರು ಮತ್ತು ಮುಖ್ಯ ಕಾರ್ಯದರ್ಶಿ ನೀಡಿದ ವರದಿ ಆಧರಿಸಿ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬ್ಯಾನರ್ಜಿಯ ಮೇಲೆ ಹಲ್ಲೆ ನಡೆದಿದೆ ಎಂಬ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸಲ್ಲಿಸಿದ ವರದಿಯಲ್ಲಿ ಸಾಕಷ್ಟು ಮಾಹಿತಿಯಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿತ್ತು. ಅಲ್ಲದೇ ಈ ಬೆನ್ನಲ್ಲೇ ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ, ವಿಶೇಷ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ಇಸಿ ಹೊಸ ವಿವರವಾದ ವರದಿಯನ್ನು ಕೋರಿತ್ತು.
ಇದನ್ನೂ ಓದಿ:ಪಶ್ಚಿಮ ಬಂಗಾಳ : ಬಿಜೆಪಿಗೆ ಮತ ಹಾಕದಂತೆ ಪೋಸ್ಟರ್ ಪ್ರದರ್ಶಿಸಿದ ನವ ದಂಪತಿ
ರಾಜ್ಯ ಸರ್ಕಾರ ಸಲ್ಲಿಸಿದ ವರದಿಯಲ್ಲಿ ಘಟನೆ ಹೇಗೆ ಸಂಭವಿಸಿತು ಮತ್ತು ಅದರ ಹಿಂದೆ ಯಾರು ಇರಬಹುದು ಎಂಬ ಮಾಹಿತಿಯ ಕೊರತೆಯಿದೆ ಎಂದು ಮೂಲಗಳು ತಿಳಿಸಿವೆ. ಮಮತಾ ಮೇಲೆ ಹಲ್ಲೆ ನಡೆದಿದೆ ಎಂಬುದನ್ನು ಸಾಬೀತುಪಡಿಸಲು ಯಾವುದೇ ಸಿಸಿಟಿವಿ ದೃಶ್ಯಾವಳಿಗಳಿಲ್ಲ ಎಂದು ವರದಿಗಳು ತಿಳಿಸಿವೆ.