ಮುಂಬೈ:ಮಮತಾ ಬ್ಯಾನರ್ಜಿ ಅವರಿಗೆ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ತಡೆ ನೀಡಿರುವ ಚುನಾವಣಾ ಆಯೋಗದ ನಿರ್ಧಾರ ಬಿಜೆಪಿಯ ಆದೇಶದ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಇದು "ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ" ಮತ್ತು ದೇಶದ ಸ್ವತಂತ್ರ ಸಂಸ್ಥೆಗಳ ದುರುಪಯೋಗ ಎಂದು ರಾವತ್ ಟ್ವೀಟ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಅವರನ್ನು ಬಂಗಾಳದ ಹುಲಿ ಎಂದು ಸಂಬೋಧಿಸಿದ ರಾವತ್, ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಶಿವಸೇನೆ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಬೆಂಬಲ ಸೂಚಿಸಿದೆ.