ಕೋಲ್ಕತ್ತಾ(ಪಶ್ಚಿಮ ಬಂಗಾಳ):ಶಿಕ್ಷಕರ ನೇಮಕಾತಿ ಹಗರಣದ (SSC scam) ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಅವರ ಬಂಧನ ಮಾಡಲಾಗಿದೆ. ನಿನ್ನೆ ಇಡಿ ಅಧಿಕಾರಿಗಳು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ತನಿಖೆ ನಡೆಸಿ ಅರ್ಪಿತಾ ಮನೆಯಲ್ಲಿ 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವನ್ನ ಬಂಧನ ಮಾಡಲಾಗಿದೆ. ಇದರ ಬೆನ್ನಲ್ಲೇ ಅವರ ಆಪ್ತೆ ಅರ್ಪಿತಾ ಅವರನ್ನು ಬಂಧನ ಮಾಡಿದ್ದಾರೆ. ಜೊತೆಗೆ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.