ನವದೆಹಲಿ :ಪಂಜಾಬ್-ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಸಾಲದ ವಂಚನೆ ಪ್ರಕರಣದಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಂಸದ ಸಂಜಯ್ ರಾವತ್ ಅವರ ಸಂಬಂಧಿ ಪ್ರವೀಣ್ ರಾವತ್ ಅವರಿಗೆ ಸೇರಿದ ₹72 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದುಕೊಂಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿ ವರ್ಷಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಹಾಗೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ₹4,335 ಕೋಟಿಯಷ್ಟು ಹಣವನ್ನು ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಆದ್ದರಿಂದ ಇಡಿ ಪ್ರಕರಣ ಕೈಗೆತ್ತಿಕೊಂಡಿದೆ.