ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಉಲ್ಲೇಖಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವೂ ಇದೆ ಎಂದು ಆರೋಪಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಶಾಕ್ ನೀಡಿದ್ದ, ಜಾರಿ ನಿರ್ದೇಶನಾಲಯ (ಇಡಿ) ಭೂಮಿ ಖರೀದಿ -ಮಾರಾಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಂಕಷ್ಟ ತಂದೊಡ್ಡಿದೆ.
ಪ್ರಕರಣದ ಹಿನ್ನೆಲೆ:ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾರಿಂದ ಹರಿಯಾಣದ ಫರಿದಾಬಾದ್‌ನಲ್ಲಿ 2006 ರಲ್ಲಿ ರಾಬರ್ಟ್ ವಾದ್ರಾ ಅವರು 40 ಎಕರೆಗೂ ಅಧಿಕ ಕೃಷಿ ಭೂಮಿಯನ್ನು ಖರೀದಿಸಿದ್ದರು. ಬಳಿಕ 2010 ರಲ್ಲಿ ಅದನ್ನು ಅದೇ ಏಜೆಂಟ್ಗೆ ವಾಪಸ್ ಮಾರಾಟ ಮಾಡಿದ್ದರು. ಇದರಲ್ಲಿ ಎನ್ಆರ್ಐ ಉದ್ಯಮಿ ಸಿಸಿ ಥಂಪಿ ಎಂಬುವರು ಭಾಗಿಯಾಗಿದ್ದಾರೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ದಂಧೆ ನಡೆದಿದೆ ಎಂದು ಇಡಿ ಆರೋಪಿಸಿದೆ.