ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಚೇರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿಯನ್ನು ತೆರೆಯುವಂತಿಲ್ಲ ಎಂದೂ ಸೂಚಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗ ಹಾಕಿದ ಇಡಿ - ಜಾರಿ ನಿರ್ದೇಶನಾಲಯದ ಅಧಿಕಾರಿಗಳು
ಮಹತ್ವದ ಬೆಳವಣಿಗೆಯಲ್ಲಿ ನವದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಅಧಿಕಾರಿಗಳು ಇಂದು ಬೀಗ ಹಾಕಿದರು.
ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗ ಹಾಕಿದ ಇಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಉನ್ನತ ಕಾಂಗ್ರೆಸ್ ನಾಯಕರು ನಿಯಮಾವಳಿಗಳನ್ನು ಉಲ್ಲಂಘಿಸಿರುವ ಆರೋಪ ಎದುರಿಸಿದ್ದಾರೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆವಾಗಿದೆ ಎಂದೂ ದೂರಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದಾದ ಮರು ದಿನವೇ ಕಚೇರಿಯನ್ನು ಸೀಲ್ ಮಾಡಲಾಗಿದೆ.