ತಿರುವನಂತಪುರಂ (ಕೇರಳ): ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಿ.ಎಂ. ರವೀಂದ್ರನ್ ಅವರಿಗೆ ಜಾರಿ ನಿರ್ದೇಶನಾಲಯ ನೊಟೀಸ್ ನೀಡಿದ್ದು, ಕೊಚ್ಚಿ ಕಚೇರಿಗೆ ಶುಕ್ರವಾರ ಹಾಜರಾಗುವಂತೆ ತಿಳಿಸಿದೆ.
ಪಿಣರಾಯಿ ವಿಜಯನ್ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಗೆ ಇಡಿ ಸಮನ್ಸ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
cm ravindran
ಶಿವಶಂಕರ್ ಅವರ ಹೇಳಿಕೆಗಳ ಆಧಾರದ ಮೇಲೆ ರವೀಂದ್ರನ್ ಅವರನ್ನು ಕರೆಸಲಾಗುತ್ತಿದೆ. ಕಳೆದ ವಾರ ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಮಾಜಿ ಕಾರ್ಯದರ್ಶಿ ಮತ್ತು ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಇಡಿ ಬಂಧಿಸಿತ್ತು.
ಚಿನ್ನ ಕಳ್ಳಸಾಗಣೆಯಲ್ಲಿ ಸಿಎಂ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಿ.ಎಂ. ರವೀಂದ್ರನ್ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ಆರೋಪಿಸಿದ್ದಾರೆ.