ಮುಂಬೈ(ಮಹಾರಾಷ್ಟ್ರ):ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಹಾರಾಷ್ಟ್ರದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೈಲಾಶ್ ಗಾಯಕ್ವಾಡ್ ಅವರಿಗೆ ಗುರುವಾರ ಸಮನ್ಸ್ ನೀಡಿದೆ.
ಅನಿಲ್ ದೇಶಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ದೂರನ್ನು ದಾಖಲಿಸಿಕೊಂಡಿದೆ.
ಅನಿಲ್ ದೇಶಮುಖ್ ಅವರು ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವಾಗ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ದೇಶಮುಖ್ ಪೊಲೀಸ್ ಅಧಿಕಾರಿಯಾಗಿದ್ದ ಸಚಿನ್ ವಾಜೆ ಮೂಲಕ ಮುಂಬೈಯ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಈಗ ಮಹಾರಾಷ್ಟ್ರದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೈಲಾಶ್ ಗಾಯಕ್ವಾಡ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಜಾರಿ ನಿರ್ದೇಶನಾಲಯ ಕಚೇರಿ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಸೇತುವೆಯಿಂದ ನದಿಗೆ ಬಿದ್ದ ಬಸ್: ಚಾಲಕ ಸೇರಿ ಆರು ಮಂದಿ ಬಲಿ