ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ಮುಖಂಡ ಸಂಜಯ್ ರಾವುತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮುಂಬೈನ ಸ್ಲಮ್ ಒಂದರ ಮರು-ಅಭಿವೃದ್ಧಿ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಇಡಿ ಮುಂದೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ನಡುವೆ ಸಮನ್ಸ್:ಶಿವಸೇನೆ ಪಕ್ಷ ಹಾಗೂ ಸರ್ಕಾರದಲ್ಲಿ ಬಂಡಾಯ ಭುಗಿಲೆದ್ದ ಬೆನ್ನಲ್ಲೇ ರಾವುತ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ಗಮನಾರ್ಹವಾಗಿದೆ. ರಾಜ್ಯಸಭಾ ಸಂಸದರೂ ಆಗಿರುವ ಸಂಜಯ್ ರಾವುತ್, ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆಯಡಿ ಮಂಗಳವಾರ ದಕ್ಷಿಣ ಮುಂಬೈನಲ್ಲಿರುವ ತನ್ನ ಕಚೇರಿಗೆ ಆಗಮಿಸಿ ಹೇಳಿಕೆಯನ್ನು ದಾಖಲಿಸುವಂತೆ ಇಡಿ ತಿಳಿಸಿದೆ.