ಕರ್ನಾಟಕ

karnataka

ETV Bharat / bharat

ನ್ಯಾಷನಲ್ ಹೆರಾಲ್ಡ್ ಕೇಸ್​: ವಿಚಾರಣೆಗೆ ಹಾಜರಾಗುವಂತೆ ಸೋನಿಯಾಗೆ ED ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ.

ED summons Sonia Gandhi
ED summons Sonia Gandhi

By

Published : Jul 11, 2022, 5:22 PM IST

ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಜುಲೈ 21ರಂದು ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ,ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಹೆಚ್ಚಿನ ಸಮಯವಕಾಶ ಕೋರಿದ್ದರು.

ಈ ಹಿಂದೆ ಜೂನ್ 8 ರಂದು ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೋನಿಯಾ ಅವರಿಗೆ ನೋಟಿಸ್ ನೀಡಿತು. ಅವರಿಗೆ ಕೋವಿಡ್ ಕಾಣಿಸಿಕೊಂಡಿದ್ದ ಕಾರಣ ಜೂನ್ 23 ರಂದು ಹಾಜರಾಗುವಂತೆ ಹೊಸ ಸಮನ್ಸ್ ನೀಡಿತ್ತು. ಆದರೆ, ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ, ಹೆಚ್ಚಿನ ಸಮಯವಕಾಶ ಕೇಳಿದ್ದರು.

ಇದನ್ನೂ ಓದಿರಿ:ಬೆಡ್ ರೂಮ್ ರೊಮ್ಯಾಂಟಿಕ್​​ ಸೀನ್ ಚಿತ್ರೀಕರಣಕ್ಕೆ ಗಂಡನ ಹಠ.. ಇಷ್ಟವಿಲ್ಲದ ಹೆಂಡ್ತಿ ಏನು ಮಾಡಿದ್ಳು?

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜೂನ್ 13 ರಿಂದ ಜೂನ್ 21ರ ನಡುವೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಐದು ಬಾರಿ ಪ್ರಶ್ನಿಸಿದೆ. 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು.

ABOUT THE AUTHOR

...view details