ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮುಂಬೈನಲ್ಲಿ ಭೂಗತ ಪಾತಕಿಗಳಿಗೆ ಸಂಬಂಧಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಸದ್ಯಕ್ಕೆ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಮನೆಗೆ ಅಧಿಕಾರಿಗಳು ಆಗಮಿಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಬೈನ ಸುಮಾರು 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ದಾಖಲಿಸಿದ ಎಫ್ಐಆರ್ ಆಧರಿಸಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.