ಚೆನ್ನೈ:ತಮಿಳುನಾಡಿನ ತಿರುಪತ್ತೂರ್ ಬಳಿಯ ಜವಡುಮಲೈನಲ್ಲಿ ವ್ಯಾನ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ವರದಿ ಪ್ರಕಾರ, ವ್ಯಾನ್ನಲ್ಲಿ ಗುಡ್ಡಗಾಡು ಪ್ರದೇಶದಲ್ಲಿದ್ದ ಪುಲಿಯೂರಿನಿಂದ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಇವರೆಲ್ಲ ಸೆಂಬರೈ ಪ್ರದೇಶ ಆಂಜನೇಯಾರ್ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ವ್ಯಾನ್ ಪುದುತ್ನಾಡು ಸಮೀಪ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ 100 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. 11 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲೇ ಆರು ಮಂದಿ ಮೃತಪಟ್ಟರೆ, ಉಳಿದವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅಪಘಾತದ ಸ್ಥಳಕ್ಕೆ ಬಂದು, ರಕ್ಷಣಾ ಕಾರ್ಯ ಕೈಗೊಂಡರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.