ದೆಹಲಿ:ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್ಪುರ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಾಲಕಿಯು ಆಟವಾಡುತ್ತಿದ್ದಾಗ ಆರೋಪಿತನೋರ್ವ ಆಮಿಷವೊಡ್ಡಿ ಹತ್ತಿರದಲ್ಲಿದ್ದ ತನ್ನ ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಎಸಗಿದ ಇಬ್ಬರೂ ಆರೋಪಿಗಳು 10ರಿಂದ 12 ವರ್ಷ ವಯಸ್ಸಿನವರು. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಟವಾಡಲು ಹೊರಗೆ ಹೋಗಿದ್ದ ಬಾಲಕಿ ಸಂಜೆ 4.30ಕ್ಕೆ ವಾಪಸ್ ಬಂದಿದ್ದಾಳೆ. ಮನೆಗೆ ಹಿಂದಿರುಗಿದ ಸಂತ್ರಸ್ತೆ ತನಗೆ ನೋವಾಗುತ್ತಿರುವ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾಳೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಬಳಿಕ ಬಾಲಕಿಯ ತಾಯಿ ಆಕೆಯನ್ನು ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಮಕ್ಕಳ ಕಲ್ಯಾಣ ಆಯೋಗವು ಕೌನ್ಸೆಲಿಂಗ್ ಮಾಡಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಅತ್ಯಾಚಾರ ದೃಢಪಟ್ಟಿದೆ. ಬಾಲಕಿಗೆ ತೀವ್ರ ಗಾಯಗಳಾಗಿದ್ದು, ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಐಸಿಯುಗೆ ಸ್ಥಳಾಂತರಿಸಲಾಗಿದೆ.
ತಾಯಿ ನೀಡಿದ ಮಾಹಿತಿಯ ಮೇರೆಗೆ ಮಂಗಳವಾರ ಬಾಲಕರನ್ನು ಅವರ ಮನೆಯಿಂದ ಬಂಧಿಸಲಾಗಿದೆ. ನ್ಯೂ ಉಸ್ಮಾನ್ಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 363 ಮತ್ತು 376 ಎಬಿ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ದೆಹಲಿ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ.
ಇದನ್ನೂ ಓದಿ:ಬಿಹಾರದಲ್ಲಿ ಹಿಂಸಾರೂಪಕ್ಕೆ ತಿರುಗಿದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿಕೆ