ಕರ್ನಾಟಕ

karnataka

ETV Bharat / bharat

ಅನಾರೋಗ್ಯಪೀಡಿತ ಪತ್ನಿಯನ್ನು ಹೆಗಲ ಮೇಲೆ ಹೊತ್ತು ಸಾಗಿ ಕೊನೆಗೆ ಕಣ್ಣೀರು ಹಾಕಿದ ವೃದ್ಧ ಪತಿ - ಹೆಗಲ ಮೇಲೆ ಅನಾರೋಗ್ಯ ಪೀಡಿತ ಹೆಂಡತಿ

ಮಳೆಯಿಂದ ರಸ್ತೆ ಸರಿಯಿಲ್ಲದ ಕಾರಣ ವೃದ್ಧ ವ್ಯಕ್ತಿಯೋರ್ವರು ತನ್ನ ಹೆಂಡತಿಯನ್ನು ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಸಾಗಿಸುತ್ತಿದ್ದರು. ಆದ್ರೆ...

Women death
Women death

By

Published : Sep 9, 2021, 8:47 PM IST

ನಂದೂರ್ಬಾರ್​(ಮಹಾರಾಷ್ಟ್ರ):ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದರ ಮಧ್ಯೆ ಮನಕಲಕುವ ಘಟನೆಯೊಂದು ವರದಿಯಾಗಿದೆ.

ಪತ್ನಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಪತಿ

ಜೋರು ಮಳೆಯಿಂದಾಗಿ ರಸ್ತೆ ಸಂಪೂರ್ಣವಾಗಿ ಬಂದ್​ ಆಗಿದ್ದರಿಂದ ನಂದೂರ್ಬಾರ್​ನ ವೃದ್ಧ ವ್ಯಕ್ತಿಯೋರ್ವರು ಅನಾರೋಗ್ಯಪೀಡಿತ ಹೆಂಡತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಮಹಿಳೆ ಕೊನೆಯುಸಿರೆಳೆದರು.

ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟ ರಸ್ತೆ

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆರೋಗ್ಯಾಧಿಕಾರಿ ಮಹೇಶ್ ಪಾಟೀಲ್​, ಭೂಕುಸಿತವಾಗಿದ್ದರಿಂದ ಆ್ಯಂಬುಲೆನ್ಸ್​ ರಸ್ತೆಮಧ್ಯೆ ಸಿಕ್ಕಿಹಾಕಿಕೊಂಡಿತ್ತು. ಹೀಗಾಗಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ವೃದ್ಧ ಮಹಿಳೆ ಸಾವನ್ನಪ್ಪುತ್ತಿದ್ದಂತೆ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details