ನವದೆಹಲಿ:ಕೇಂದ್ರ ಚುನಾವಣಾ ಆಯೋಗ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಲಿದ್ದು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಇಂದು ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ - ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ
11:24 February 26
ಇಂದು ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ
ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣೆ ದಿನಾಂಕ ಘೋಷಣೆಯಾದರೆ ನೀತಿ ಸಂಹಿತೆ ಕೂಡಾ ಜಾರಿಯಾಗಲಿದೆ. ಎಲ್ಲಾ ಪಕ್ಷಗಳು ಚುನಾವಣಾ ದಿನಾಂಕ ಘೋಷಣೆಗೆ ಕಾಯುತ್ತಿದ್ದು, ರಾಜಕೀಯ ಅಖಾಡ ರಂಗೇರಲಿದೆ.
ಈ ಕುರಿತು ಚುನಾವಣಾ ಆಯೋಗ ಬುಧವಾರ ಸಭೆಯೊಂದನ್ನು ನಡೆಸಿದ್ದು, ಈ ಸಭೆಯಲ್ಲಿ ನಾಲ್ಕು ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಚುನಾವಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಯಾದರೂ, ಕೇರಳದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಆತಂಕದಲ್ಲಿಯೇ ಚುನಾವಣೆ ನಡೆಸಬೇಕಿದೆ. ಎಷ್ಟು ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂಬುದನ್ನು ಚುನಾವಣಾ ಆಯೋಗ ನಿರ್ಧಾರ ಮಾಡಲಿದೆ.