ನವದೆಹಲಿ:ಕೇಂದ್ರ ಚುನಾವಣಾ ಆಯೋಗವು ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಇಂದು ಘೋಷಣೆ ಮಾಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯ ವೇಳಾಪಟ್ಟಿಯನ್ನು ಶನಿವಾರ (ಇಂದು) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ.
ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂದು ಘೋಷಣೆ - Five States Election
ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3.30ಕ್ಕೆ ಘೋಷಣೆ ಮಾಡಲಿದೆ.
Five States Election: ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂದು ಘೋಷಣೆ
ಚುನಾವಣಾ ಆಯೋಗವು ಗುರುವಾರವಷ್ಟೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಕೋವಿಡ್ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ್ದು, ಇಂದು ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಲಿದೆ.
ಇದನ್ನೂ ಓದಿ:ಒಂದೂವರೆ ಲಕ್ಷದ ಸನಿಹಕ್ಕೆ ಕೊರೊನಾ ಪ್ರಕರಣಗಳು.. ಏರುತ್ತಲೇ ಇದೆ ಕೋವಿಡ್ ಭಯದ ಅಲೆ!
Last Updated : Jan 8, 2022, 12:36 PM IST