ಪಾರ್ವತಿಪುರಂ ಮಾನ್ಯಂ (ಆಂಧ್ರ ಪ್ರದೇಶ):ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯಲ್ಲಿ ಆನೆಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿವೆ. ಏಕಾಏಕಿ ಅನೇಕ ಆನೆಗಳು ಗ್ರಾಮಕ್ಕೆ ನುಗ್ಗಿದ್ದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸ್ಥಳೀಯ ಅರಣ್ಯ ಪ್ರದೇಶದಿಂದ ಆನೆಗಳು ಬರುತ್ತಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಕುರುಪಾಂ ಕ್ಷೇತ್ರದಲ್ಲಿ ಆನೆಗಳು ಅವಾಂತರ ಸೃಷ್ಟಿಸಿವೆ. ಗರುಗಬಿಲ್ಲಿ ಮಂಡಲದ ಖಡ್ಗವಲಸ ಗ್ರಾಮಕ್ಕೆ ನುಗ್ಗಿದ ಆನೆಗಳ ಹಿಂಡು ರೈಸ್ ಮಿಲ್ ಮೇಲೆ ದಾಳಿ ಮಾಡಿವೆ. ಇಡೀ ಆವರಣವನ್ನು ಆನೆಗಳು ಧ್ವಂಸಗೊಳಿಸಿವೆ.