ಕರ್ನಾಟಕ

karnataka

ETV Bharat / bharat

ಕಾರು-ಬಸ್​​ ನಡುವೆ ಭೀಕರ ರಸ್ತೆ ಅಪಘಾತ: 11 ಮಂದಿ ದುರ್ಮರಣ - ಜಲ್ಲಾರ್ ಪೊಲೀಸ್ ಠಾಣೆ ಬಳಿ ಅಪಘಾತ

ಮಧ್ಯಪ್ರದೇಶ ಬೇತುಲ್‌ನಲ್ಲಿ ಕಾರಿಗೆ ಬಸ್ ಡಿಕ್ಕಿ. ಸ್ಥಳದಲ್ಲೇ 11 ಮಂದಿ ಸಾವು.

bus collides with car in Madhya
ಕಾರು ಬಸ್​​ ನಡುವೆ ಭೀಕರ ರಸ್ತೆ ಅಪಘಾತ

By

Published : Nov 4, 2022, 8:48 AM IST

Updated : Nov 4, 2022, 10:18 AM IST

ಭೋಪಾಲ್​:ಮಧ್ಯಪ್ರದೇಶದ ಬೇತುಲ್ ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದು ಕನಿಷ್ಠ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು(ಶುಕ್ರವಾರ) ನಸುಕಿನಲ್ಲಿ ಅವಘಡ ಸಂಭವಿಸಿದೆ. ಮೃತರಲ್ಲಿ ಐವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.

ಜಲ್ಲಾರ್ ಪೊಲೀಸ್ ಠಾಣೆ ಬಳಿ ದುರ್ಘಟನೆ ಸಂಭವಿಸಿದೆ. ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ ಸಿಮಲಾ ಪ್ರಸಾದ್ ತಿಳಿಸಿದರು. ಮೂಲಗಳ ಪ್ರಕಾರ, ಕಾರಿನಲ್ಲಿದ್ದವರೆಲ್ಲರೂ ಮಹಾರಾಷ್ಟ್ರ ಮೂಲದ ಕಾರ್ಮಿಕರು. ಹಬ್ಬದ ನಿಮಿತ್ತ ಕಾರಿನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಚಾಲಕನ ನಿರ್ಲಕ್ಷ್ಯತನದಿಂದ ಕಾರು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್​ನ ಮುಂಭಾಗದ ಭಾಗಕ್ಕೆ ಹಾನಿಯಾಗಿದೆ. ಹಾನಿಗೊಳಗಾದ ಕಾರಿನ ಭಾಗಗಳನ್ನು ಕತ್ತರಿಸಿ ನಾಲ್ಕು ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಮಾಹಿತಿ ಪಡೆದು ಬೆತುಲ್ ಜಿಲ್ಲಾಧಿಕಾರಿ ಹಾಗೂ ಎಸ್​​ಪಿ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಾರು ಲಾರಿ ಮಧ್ಯೆ ಭೀಕರ ಅಪಘಾತ: ಐವರ ಸಾವು

ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ:'ಬೆತುಲ್‌ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಿಂದ ನೋವುಂಟಾಗಿದೆ. ಮೃತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ ಮೃತ ವ್ಯಕ್ತಿಗಳ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

Last Updated : Nov 4, 2022, 10:18 AM IST

ABOUT THE AUTHOR

...view details