ಕೊಲ್ಹಾಪುರ(ಮಹಾರಾಷ್ಟ್ರ):ಬೆಳಗಾವಿಯಿಂದ ಮುಂಬೈಗೆ ತೆರಳುತ್ತಿದ್ದ ವಾಯುಸೇನೆಯ ಎಂಐ8 ಹೆಲಿಕಾಪ್ಟರ್ ತಾಂತ್ರಿಕ ತೊಂದರೆಯಿಂದಾಗಿ ಕೊಲ್ಹಾಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಹೆಲಿಕಾಪ್ಟರ್ನಲ್ಲಿ ವಾಯುಪಡೆಯ 9 ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಕೊಲ್ಹಾಪುರದ ವಿಮಾನ ನಿಲ್ದಾಣದಲ್ಲಿ ಎಂಐ8 ಹೆಲಿಕಾಪ್ಟರ್ ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಕಮಲ್ ಕಟಾರಿಯಾ ತಿಳಿಸಿದ್ದಾರೆ.