ಶ್ರೀನಗರ: ಕಳೆದ ಕೆಲ ದಿನಗಳಿಂದ ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಉಗ್ರರ ಅಟ್ಟಹಾಸ ಜೋರಾಗಿದ್ದು, ಅವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರು ಭಯೋತ್ಪಾದಕರ ಹೆಡೆಮುರಿ ಕಟ್ಟುವ ಕೆಲಸ ಮಾಡ್ತಿದ್ದಾರೆ.
ಇಂದು ಬೆಳಗ್ಗೆ ಪೂಂಚ್ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಐವರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದ್ದು, ಇದರ ಬೆನ್ನಲ್ಲೇ ಶೋಪಿಯಾನ್ ಪ್ರದೇಶದಲ್ಲಿ ಉಗ್ರರು - ಜಮ್ಮು ಕಾಶ್ಮೀರ ಪೊಲೀಸರ ನಡುವೆ ಗುಂಡಿನ ಕಾಳಗ ನಡೆದಿದೆ.
ಈ ವೇಳೆ, ಮನೆಯೊಂದರಲ್ಲಿ ಸಿಕ್ಕಿಬಿದ್ದಿರುವ ಭಯೋತ್ಪಾದಕರು ಶರಣಾಗುವಂತೆ ಸೂಚನೆ ನೀಡಲಾಗಿದೆ. ಶೋಪಿಯಾನ್ನ ಇಮಾಮ್ಸಾಬ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ಈ ವೇಳೆ ಉಗ್ರರು ಮನೆಯಲ್ಲಿ ಅಡಗಿ ಕುಳಿತಿದ್ದು, ಅವರನ್ನ ಸುತ್ತುವರೆದಿರುವ ಪೊಲೀಸರು ಶರಣಾಗುವಂತೆ ತಿಳಿಸಿದ್ದಾರೆ.
ಇದನ್ನೂ ಓದಿರಿ:ಉಗ್ರರ ವಿರುದ್ಧದ ಕಾರ್ಯಾಚರಣೆ: ಸೇನಾಧಿಕಾರಿ, ನಾಲ್ವರು ಯೋಧರು ಹುತಾತ್ಮ
ಲಭ್ಯವಾಗಿರುವ ಮಾಹಿತಿ ಪ್ರಕಾರ 348 ರಾಷ್ಟ್ರೀಯ ರೈಫಲ್ಸ್, 178 ಸಿಆರ್ಪಿಎಫ್ ಹಾಗೂ ಜಮ್ಮು - ಕಾಶ್ಮೀರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.