ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರಗಾಮಿಗಳು ಹಾಗೂ ಭದ್ರತಾ ಪಡೆಗಳ ನಡುವೆ ಮುಖಾಮುಖಿ - ಜಮ್ಮು-ಕಾಶ್ಮೀರ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಪಿಯಾನ್ ಎನ್ಕೌಂಟರ್
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಲಭಿಸಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಶೋಧ ನಡೆಸುತ್ತಿರುವಾಗ, ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಇದರ ಪ್ರತೀಕವಾಗಿ ಒಬ್ಬ ಉಗ್ರನನ್ನು ಎನ್ಕೌಂಟರ್ ಮಾಡಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.