ಪುಲ್ವಾಮಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ - ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
06:05 December 09
ಪುಲ್ವಾಮಾದ ಟಿಕೆನ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‌ಕೌಂಟರ್ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಬೇಟೆಯಾಡಲಾಗಿದೆ. ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ): ಪುಲ್ವಾಮಾದ ಟಿಕೆನ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ನಡೆದ ಎನ್‌ಕೌಂಟರ್ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸದೆ ಬಡಿದಿದೆ.
ಭಯೋತ್ಪಾದಕರನ್ನು ಮಟ್ಟಹಾಕಲು ಪೊಲೀಸರು ಮತ್ತು ಸೇನೆ ಕಾರ್ಯಾಚರಣೆಗಿಳಿದಿವೆ. ಪುಲ್ವಾಮಾದ ಟಿಕೆನ್ ಪ್ರದೇಶದಲ್ಲಿ ಬೆಳಗ್ಗೆಯಿಂದ ಎನ್‌ಕೌಂಟರ್ ಆರಂಭವಾಗಿದ್ದು, ಈ ವೇಳೆ ಇಬ್ಬರು ಉಗ್ರನ್ನು ಸೈನಿಕರು ಬೇಟೆಯಾಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ರು.
ಉಗ್ರರನ್ನು ಮಟ್ಟಹಾಕಲು ಭದ್ರತಾ ಪಡೆಗಳಿಂದ ಎನ್‌ಕೌಂಟರ್ ಕಾರ್ಯಾಚರಣೆ ಮುಂದುವರಿದಿದೆ.