ಶ್ರೀನಗರ:ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖಂಡಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಭಯೋತ್ಪಾದಕ ಹತನಾಗಿದ್ಧಾನೆ. ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡ ಖಂಡಿಪೋರಾದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಓರ್ವ ಭಯೋತ್ಪಾದಕ ಹತ - ಕುಲ್ಗಾಮ್‌ನಲ್ಲಿ ಎನ್‌ಕೌಂಟರ್
ಕುಲ್ಗಾಮ್ ಜಿಲ್ಲೆಯ ಖಂಡಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಸಾಂದರ್ಭಿಕ ಚಿತ್ರ
ಪಡೆಗಳ ಜಂಟಿ ತಂಡ ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಮೂಲಗಳ ಪ್ರಕಾರ ಎರಡರಿಂದ ಮೂರು ಮಂದಿ ಉಗ್ರರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಶೋಪಿಯಾನ್ ಎನ್‌ಕೌಂಟರ್ : ಓರ್ವ ಭಯೋತ್ಪಾದಕ ಹತ