ಕಾಶ್ಮೀರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದ ವೈಲೂನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಅನಂತ್‌ನಾಗ್ ಎನ್ಕೌಂಟರ್: ಮೂವರು ಉಗ್ರರ ಸದೆಬಡಿದ ಭದ್ರತಾ ಪಡೆ - Anantnag Encounter
ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಮೂವರು ಉಗ್ರರ ಹತ್ಯೆಗೈಯ್ಯಲಾಗಿದೆ.
ಅನಂತ್‌ನಾಗ್‌ನಲ್ಲಿ ಉಗ್ರರು-ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ
ವೈಲೂನಲ್ಲಿ ಉಗ್ರರು ಅಡಗಿದ್ದಾರೆಂಬ ನಿಖರ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಭದ್ರತಾ ಪಡೆ ಎನ್ಕೌಂಟರ್ ಆರಂಭಿಸಿತ್ತು. ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ಎನ್ಕೌಂಟರ್ನಲ್ಲಿ ಮೃತಪಟ್ಟವರು ಲಷ್ಕರ್- ಎ -ತೊಯ್ಬಾ (ಎಲ್‌ಇಟಿ) ಸಂಘಟನೆಯವರು ಎಂದು ಹೇಳಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
Last Updated : May 11, 2021, 11:41 AM IST